Wednesday, 11th December 2024

ರಾಜ್ಯಸಭೆಗೆ ಶ್ರೀಮತಿ ಸುಧಾಮೂರ್ತಿ ನಾಮನಿರ್ದೇಶನ

ವದೆಹಲಿ: ವಿಶ್ವ ಮಹಿಳಾ ದಿನ ಮತ್ತು ಮಹಾಶಿವರಾತ್ರಿ ದಿನದಂದೇ ಭಾರತದ ರಾಷ್ಟ್ರಪತಿಗಳು ಕನ್ನಡತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ‘ಶ್ರೀಮತಿ ಸುಧಾಮೂರ್ತಿ ಅವರನ್ನು ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ತಂದಿದೆ  ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿ ದಾಯಕವಾಗಿದೆ ಎಂದು ಹೇಳಿದ್ದಾರೆ.

‘ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಲಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಹೇಳಿದ್ದಾರೆ.