Saturday, 14th December 2024

ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ ಇಂದು

ನವದೆಹಲಿ: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗ ಲಿದ್ದಾರೆ. ಕೇಂದ್ರ ಸಂಪುಟವು ಶುಕ್ರವಾರ ಈ ಕುರಿತು ನಿರ್ಧಾರ ಕೈಗೊಂಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ನಾಯಕನಿಗೆ ವಿದಾಯ ಹೇಳಲು ನಿರ್ಣಯಿಸಿದೆ.

ಇದೇ ವೇಳೆ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಪ್ರಮುಖ ಗಣ್ಯರು ಶುಕ್ರವಾರ ನವದೆಹಲಿಯ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.