Saturday, 14th December 2024

ರಾಮಲಲ್ಲಮೂರ್ತಿ ಲೋಕಾರ್ಪಣೆ

ಯ್ಯೋಧೆ: ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ.

ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು. ದೇವಲಾಯದ ಅವರಣದಲ್ಲಿ ನೇರವೇರಿದ ಆಚರಣೆಗಳಲ್ಲಿ ಅವರು ಭಾಗವಹಿಸಿದರು.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೇರವೇರಿದೆ.

ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಬಾಲಿವುಡ್ ಸೂಪರ್ಸ್ಟಾರ್ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಅನುಷ್ಕಾ ಶರ್ಮಾ, ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಹಾಜರಿದ್ದಾರೆ.

ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿದ ನಂತರ 2020 ರಲ್ಲಿ ರಾಮ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು. 2019 ರಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು.