Monday, 16th September 2024

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ ನಿಷೇಧಕ್ಕೆ ಪಿಐಎಲ್‌

ಲಖನೌ: ಅಯೋಧ್ಯೆಯ ರಾಮಮಂದಿರದಲ್ಲಿ ಜ.22ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ ನಿಷೇಧಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಉತ್ತರ ಪ್ರದೇಶದ ಘಾಜಿಯಾಬಾದ್‌ನ ಭೋಲಾ ದಾಸ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ.

ಪ್ರಾಣ ಪ್ರತಿಷ್ಠೆ ಕುರಿತು ಜ್ಯೋತಿರ್ಪೀಠದ ಶಂಕರಾಚಾರ್ಯರ ಆಕ್ಷೇಪಗಳನ್ನು ಉಲ್ಲೇಖಿಸಿ, ಸಮಾರಂಭ ನಿಷೇಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುತ್ತಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಲಿದ್ದಾರೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಜ್ಯೋತಿಪೀಠಗಳ ಶಂಕರಾಚಾರ್ಯರ ಆಕ್ಷೇಪವಿದೆ. ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ದೇವಾಲಯ ಇನ್ನೂ ಅಪೂರ್ಣವಾಗಿದೆ. ಅಪೂರ್ಣ ದೇವಾಲಯದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಪೂರ್ಣ ದೇವಾಲಯದಲ್ಲಿ ʼಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ಆಕ್ಷೇಪಿಸಿರುವ ಜೋಶಿಪೀಠದ ಶಂಕರಾಚಾರ್ಯರು ಜ.22ರ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *