Thursday, 12th December 2024

Crime News: ಜಾಮೀನಿನ ಮೇಲೆ ಹೊರಬಂದ ಅತ್ಯಾಚಾರ ಆರೋಪಿ ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ!

ಭುವನೇಶ್ವರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು(Bail) ಪಡೆದಿದ್ದ ಆರೋಪಿಯೊಬ್ಬ ಸಂತ್ರಸ್ತೆಯನ್ನು ಅಪಹರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಲವು ಕಡೆ ಎಸೆದು ರಾಕ್ಷಸ ಪ್ರವೃತ್ತಿ ಮೆರೆದಿದ್ದಾನೆ. ಆರೋಪಿ ಕುನು ಕಿಸನ್‌ನನ್ನು(Kunu Kissan) ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಬುಧವಾರ ( ಡಿ.11) ತಿಳಿಸಿದ್ದಾರೆ (Crime News).

2023ರ ಆಗಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕುನು ಕಿಸನ್ ಅತ್ಯಾಚಾರ ಎಸಗಿದ್ದ. ಈ ಆರೋಪದಲ್ಲಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ(Protection of Children from Sexual Offences Act) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಕುನು ಕಿಸನ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಆತ ಮೇಲೆ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.

ಸಂತ್ರಸ್ತ ಬಾಲಕಿ ಜರ್ಸುಗಢದಲ್ಲಿರುವ(Jharsuguda) ತನ್ನ ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮತ್ತೆ ಆಕೆಯನ್ನು ಅಪಹರಿಸಿ ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ದೇಹದ ಭಾಗಗಳನ್ನು ತರ್ಕೇರಾ, ಬ್ರಹ್ಮಣಿ ನದಿ ಹಾಗೂ ಬಲುಘಾಟ್‌ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಸನ್‌ ತನ್ನ ಬೈಕ್‌ನ ನಂಬರ್‌ ಪ್ಲೇಟ್ ಬದಲಾಯಿಸಿಕೊಂಡು ತಿರುಗಾಡುವುದು ಸಿಸಿ‌ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ನಂತರ ಬಾಲಕಿ ನಾಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂತು. ಈ ವೇಳೆ ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಂತ್ರಸ್ತೆಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಎಂದು ಪೊಲೀಸರು ಹೇಳಿದ್ದಾರೆ. ಮೃತಳ ದೇಹದ ಭಾಗಗಳನ್ನು ವಶಪಡಿಸಿಕೊಂಡು ಪೋಷಕರಿಗೆ ಒಪ್ಪಿಸಲಾಗಿದೆ ಎನ್ನಲಾಗಿದೆ.

ಅತ್ಯಾಚಾರ ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದರೆ ತಾನು ಅಪರಾಧಿ ಎಂದು ತೀರ್ಪು ಬರಬಹುದು ಎಂಬ ಭಯದಿಂದ ಈ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿದ್ದಾನೆ. ಕಿಸನ್‌ ಹಾಗೂ ಸಂತ್ರಸ್ತೆಯು ಬಹಳ ಕಾಲದಿಂದ ಪರಸ್ಪರ ಪರಿಚಿತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹತ್ಯೆಗೆ ಬಳಸಿದ ಚಾಕು ಮತ್ತು ಮೋಟರ್‌ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದು,ಈ ಪ್ರಕರಣ ಸಂಬಂಧ ಇನ್ನು ಹೆಚ್ಚಿನ ತನಿಖೆ ನಡೆಸುವುದಾಗಿ ತಿಳಿದು ಬಂದಿದೆ.

ನಟ ಸಿದ್ದಿಕ್‌ ಅರೆಸ್ಟ್ ‌ಮತ್ತು ಬಿಡುಗಡೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಿದ್ದ ಮಲಯಾಳ ನಟ ಸಿದ್ದಿಕ್‌ನನ್ನು ಬಂಧಿಸಿದ್ದ ತನಿಖಾ ಸಂಸ್ಥೆ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸಿದ್ದಿಕ್‌ ಬಂಧನಕ್ಕೆ ಸುಪ್ರೀಂ ಕೋರ್ಟ್‌ ನ.19ರಂದು ಮಧ್ಯಂತರ ತಡೆ ನೀಡಿತ್ತು. ವಿಚಾರಣೆಗೆ ಹಾಜರಾದ ಸಿದ್ದಿಕ್‌ನನ್ನು ಔಪಚಾರಿಕವಾಗಿ ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜಾಮೀನಿನ ಆಧಾರದಲ್ಲಿ ಬಿಡುಗಡೆಗೊಳಿಸಲಾಗಿದೆ.

ಸಿನಿಮಾದಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ತಿರುವನಂತಪುರದ ಹೋಟೆಲ್‌ನಲ್ಲಿ ಸಿದ್ದಿಕ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಕಲಾವಿದೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ಸಿದ್ದಿಕ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ:ಅಪ್ರಾಪ್ತೆ ಗ್ಯಾಂಗ್‌ ರೇಪ್‌: ಆರೋಪಿಗಳ ಮನೆ ನೆಲಸಮ