Sunday, 15th December 2024

ಶಾಸ್ತ್ರೀಯ ಗಾಯಕ ರಶೀದ್ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತಾ: ಕಳೆದ ತಿಂಗಳಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ.

ಪ್ರಾಸ್ಟೇಟ್ ಕ್ಯಾನ್ಸರಿನಿಂದ ಬಳಲುತ್ತಿರುವ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.

ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಗಾಯಕ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.