Friday, 13th December 2024

ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟ್ರಕ್‌: ಆರು ಮಂದಿ ಸಾವು

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.
10 ಮಂದಿ ಗಾಯಗೊಂಡಿದ್ದಾರೆ. ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್ ನಿಯಂತ್ರಣ ವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಭಿಷೇಕ್ ತಿವಾರಿ ತಿಳಿಸಿ ದ್ದಾರೆ.