Friday, 22nd November 2024

ಸೆಪ್ಟೆಂಬರ್ 5ರವರೆಗೆ ಸಂಜಯ್ ರಾವುತ್ ಬಂಧನ ವಿಸ್ತರಣೆ

ಮುಂಬೈ: ಮುಂಬೈ ಪಾತ್ರ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿ ಬಂಧಿತ ಶಿವಸೇನಾ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಲಾಗಿದೆ.

ಆ.8 ರಂದು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅದು ಸೋಮವಾರ ಕೊನೆಗೊಂಡಿದೆ. ಈ ಹಿನ್ನೆಲೆ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಕಸ್ಟಡಿಯನ್ನು ಸೆಪ್ಟೆಂಬರ್ 5ರ ವರೆಗೆ ವಿಸ್ತರಿಸಿದೆ.

 

ಆ.1 ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾವುತ್ ಅವರನ್ನು ಬಂಧಿಸಿ, ಮುಂಬೈ ಕೋರ್ಟ್‌ಗೆ ಹಾಜರು ಪಡಿಸಿದ್ದರು. ಕೋರ್ಟ್ ಆಗಸ್ಟ್ 4ರ ತನಕ ಇಡಿ ವಶಕ್ಕೆ ನೀಡಿತ್ತು. ಬಳಿಕ ಮತ್ತಷ್ಟು ವಿಚಾರಣೆ ನಡೆಸುವುದಕ್ಕಾಗಿ ಆಗಸ್ಟ್ 08 ರ ವರೆಗೆ ಇಡಿ ಕಸ್ಟಡಿಗೆ ನೀಡಿತ್ತು.

ಪತ್ರಾ ಚಾಲ್ ಪುನರಾಭಿವೃದ್ಧಿ ಹಗರಣದಲ್ಲಿ, ರಿಯಲ್ ಎಸ್ಟೇಟ್ ಕಂಪನಿ ಹೌಸಿಂಗ್ ಡೆವಲಪ್‌ಮೆಂಟ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನಿಂದ ಪ್ರವೀಣ್ ರಾವುತ್ ಪಡೆದ 112 ಕೋಟಿ ರೂಪಾಯಿಯಲ್ಲಿ ಸಂಜಯ್ ರಾವುತ್ ಮತ್ತು ಅವರ ಕುಟುಂಬ 1.06 ಕೋಟಿಯ ನೇರ ಫಲಾನುಭವಿಗಳು ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.

ಜೈಲಿನಲ್ಲಿ ಸಂಜಯ್ ರಾವುತ್‌ಗೆ ಮನೆಯ ಊಟಕ್ಕೆ ಅವಕಾಶ ನೀಡಲಾಗಿದೆ. ರಾವುತ್ ಬಂಧನದ ನಂತರ ಪ್ರಕರಣಕ್ಕೆ ಸಂಬಂಧಿಸಿ ದಂತೆ ಅವರ ಪತ್ನಿ ವರ್ಷಾ ರಾವುತ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.