Sunday, 15th December 2024

ಆ.22ರವರೆಗೆ ರಾವತ್ ನ್ಯಾಯಾಂಗ ಬಂಧನ ವಿಸ್ತರಣೆ

ಮುಂಬೈ: ಪತ್ರಾ ಚಾವ್ಲ್ ಹಗರಣಕ್ಕೆ ಸಂಬಂಧಿಸಿ ಮುಂಬೈನ ವಿಶೇಷ ಕೋರ್ಟ್ ಸೋಮ ವಾರ ಶಿವಸೇನಾ ಮುಖಂಡ ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನು ಆ.22ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ವೇಳೆ ಎಲ್ಲಾ ಔಷಧಗಳನ್ನು ಬಳಸಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿದ ನಂತರವೂ ಯಾವುದೇ ಜಾಮೀನು ಅರ್ಜಿ ಸಲ್ಲಿಸಲು ಹೋಗಿಲ್ಲ ಎಂದು ರಾವತ್ ಪರ ವಕೀಲರು ತಿಳಿಸಿದ್ದಾರೆ.

ಸಂಜಯ್ ರಾವತ್ ಗೆ ಆಗಸ್ಟ್ 4ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತ್ತು. ಬಳಿಕ ವಿಶೇಷ ಕೋರ್ಟ್ ಆಗಸ್ಟ್ 8ರವರೆಗೆ ಬಂಧನದ ಅವಧಿ ವಿಸ್ತರಿಸಿತ್ತು. ಇದೀಗ ಮತ್ತೆ ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ನೀಡಿದೆ.

ವಸತಿ ಪುನರಾಭಿವೃದ್ಧಿ ಯೋಜನೆಗಳಿಂದ ರಾವತ್ ಮತ್ತು ಅವರ ಕುಟುಂಬ ಒಂದು ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದ್ದು, ಇದಕ್ಕಾಗಿ ಇನ್ನಷ್ಟು ದಿನಗಳ ಕಾಲ ವಶಕ್ಕೆ ಒಪ್ಪಿಸಬೇಕೆಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು.