Thursday, 12th December 2024

ಆರ್‌.ಬಿ.ಐ ಗವರ್ನರ್‌ ಶಕ್ತಿಕಾಂತ್ ದಾಸ್ ಕೊರೊನಾ ವೈರಸ್ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಶಕ್ತಿಕಾಂತ್ ದಾಸ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ನನಗೆ ಕೊವಿಡ್-19 ಸೋಂಕು ತಗುಲಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಕೊರೊನಾ ವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಐಸೋಲೇಷನ್ ನಲ್ಲಿ ಇದ್ದುಕೊಂಡೇ ಪ್ರತಿದಿನ ಕಾರ್ಯ ನಿರ್ವಹಿಸುವುದಕ್ಕೆ ಶಕ್ತನಾಗಿದ್ದೇನೆ. ಆರ್ ಬಿಐಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಎಂದಿನಂತೆ ನಡೆದುಕೊಂಡು ಹೋಗುತ್ತವೆ. ಪ್ರತಿನಿತ್ಯ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿ ಇರುತ್ತೇನೆ ಎಂದು ಶಕ್ತಿಕಾಂತ್ ದಾಸ್ ಟ್ವೀಟ್ ಮಾಡಿದ್ದಾರೆ.