ಭೋಪಾಲ್: ಮಧ್ಯ ಪ್ರದೇಶ(Madhya Pradesh) ಸರ್ಕಾರದ ನೇಮಕಾತಿ ಪರೀಕ್ಷೆಯಲ್ಲಿ(Recruitment Exam) ‘ಕೃಪಾಂಕ’ (Normalisation) ಪ್ರಕ್ರಿಯೆಯನ್ನು ಅಳವಡಿಸಿಕೊಂಡ ಕಾರಣ ಒಬ್ಬ ಅಭ್ಯರ್ಥಿಯು (Candidate) ಒಟ್ಟು 100 ಅಂಕಗಳಿಗೆ 101.66 ಅಂಕಗಳನ್ನು ಪಡೆದಿರುವುದು ತಿಳಿದು ಬಂದಿದೆ. ಇದನ್ನು ಖಂಡಿಸಿ ಉದ್ಯೋಗಾಕಾಂಕ್ಷಿಗಳು ಇಂದೋರ್(Indore)ನಲ್ಲಿ ಪ್ರತಿಭಟನೆ (Protest) ನಡೆಸಿದ್ದಾರೆ ಎಂಬ ಮಾಹಿತಿಯಿದೆ.
मध्यप्रदेश ने इतिहास रच दिया..
— || MP Yuva Shakti || (@MPYuvaShakti) December 16, 2024
मध्यप्रदेश सहित पूरे भारत की कोई भी एग्जाम मे कभी किसी ने पूरे प्रश्न सही नही किए होंगे लेकिन मध्यप्रदेश के अभ्यर्थी ने 100 मे 100 प्रश्न सही किए और 101.66 अंक हासिल किए।
यह तभी संभव है जब अभ्यर्थी, परीक्षा एजेंसी साथ मिलकर फर्जीवाड़े को अंजाम दे। https://t.co/7V1P2y2Js6 pic.twitter.com/W6fctqtRvU
ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು, ನ್ಯಾಯಯುತ ತನಿಖೆಗೆ ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳು, ನಂತರ ಮುಖ್ಯಮಂತ್ರಿಗೆ ಬರೆದಿರುವ ಮನವಿ ಪತ್ರವನ್ನು ಡಿಸಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪ್ರತಿಭಟನಾಕಾರರು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಬರೆದಿರುವ ಪತ್ರದಲ್ಲಿ 2023ರಲ್ಲಿ ಅರಣ್ಯ ಮತ್ತು ಬಂಧಿಖಾನೆ ಇಲಾಖೆಗಳ ಸಿಬ್ಬಂದಿ ನೇಮಕಾತಿಗೆ ನಡೆದ ಜಂಟಿ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬರು 100ಕ್ಕೆ 101.66 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಉಲ್ಲೇಖಿಸಿದ್ದಾರೆ.
ಮಧ್ಯಪ್ರದೇಶದ ಉದ್ಯೋಗಿಗಳ ನೇಮಕಾತಿ ಮಂಡಳಿ ನಡೆಸಿದ್ದ ಪರೀಕ್ಷೆಯ ಫಲಿತಾಂಶವು ಡಿಸೆಂಬರ್ 13ರಂದು ಘೋಷಣೆಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಮಂಡಳಿ, ಹೊಸ ನಿಯಮಗಳ ಪ್ರಕಾರ ಕೃಪಾಂಕ ಪ್ರಕ್ರಿಯೆ ಅಳವಡಿಸಿಕೊಂಡಿರುವುದರಿಂದ ಅಭ್ಯರ್ಥಿಯೊಬ್ಬರು 100ಕ್ಕೂ ಅಧಿಕ ಅಂಕ ಪಡೆದಿದ್ದಾರೆ ಎಂದು ಹೇಳಿತ್ತು.
ʼʼನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬರು ನಿಗದಿತ ಅಂಕಗಳಿಗಿಂತ ಅಧಿಕ ಅಂಕ ಗಳಿಸಿರುವ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲುʼʼ ಎಂದು ಪ್ರತಿಭಟನಾಕಾರರ ನೇತೃತ್ವವಹಿಸಿದ್ದ ಉದ್ಯೋಗಾಕಾಂಕ್ಷಿ ಗೋಪಾಲ್ ಪ್ರಜಾಪತ್ ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಲವರು ಎಚ್ಚರಿಕೆ ನೀಡಿದ್ದಾರೆ.
ಕೃಷಿ ಕ್ಷೇತ್ರದ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ
ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ(ಡಿ.16) ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು.
ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರ್ಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಕಾಯ್ದೆ ತಿದ್ದುಪಡಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಹಗಲು ಹೊತ್ತು ನಿರಂತರ 12 ಗಂಟೆ ಥ್ರೀ ಫೇಸ್ ವಿದ್ಯುತ್ ಹಾಗೂ ರಾತ್ರಿ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಅಕ್ರಮ-ಸಕ್ರಮ ಹಾಗೂ ಶೀಘ್ರ ಸಂಪರ್ಕ ಯೋಜನೆಯನ್ನು ಮುಂದುವರೆಸಬೇಕು. ಭತ್ತದ ಬೆಳೆಗೆ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 5. ಸಾವಿರ ರೂ.ದರ ನೀಡಬೇಕು. ದ್ರಾಕ್ಷಿ (ಒಣ) ಬೆಳೆಗೆ ಪ್ರತಿ ಕೆಜಿಗೆ 400 ರೂ. ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ನೂರಾರು ರೈತರು ಪ್ರತಿಭಟನೆ ನಡೆಸಿರುವುದಾಗಿ ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ:Pavithra Gowda: ಬರೋಬ್ಬರಿ 6 ತಿಂಗಳ ಬಳಿಕ ಜೈಲಿನಿಂದ ಪವಿತ್ರಾ ಗೌಡ ರಿಲೀಸ್