ಮುಂಬೈ ಪ್ರಾದೇಶಿಕ ಹವಾಮಾನ ಕೇಂದ್ರ ಬುಧವಾರ ಮುಂಬೈ, ಥಾಣೆ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಮುಂಬೈ ಮತ್ತು ಥಾಣೆಗೆ ಜು.10 ರವರೆಗೆ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ.
ರಾಜಧಾನಿ ನಗರದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿದ್ದು, ಪ್ರದೇಶ ಗಳು ಬಹುತೇಕ ಪ್ರದೇಶಗಳು ಜಲಾವೃತವಾಗಿವೆ. ಮಂಗಳವಾರ ಮುಂಬೈನ ಘಾಟ್‌ಕೋಪರ್ ನಗರದಲ್ಲಿ ಭಾರಿ ಮಳೆಯ ನಡುವೆ ಭೂಕುಸಿತ ಸಂಭವಿಸಿ, ಮನೆ ನೆಲಸಮವಾಗಿದೆ. ಬುಧವಾರ, ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪ್ರತಾಪಗಢ ಕೋಟೆ ಬಳಿ ಮತ್ತೊಂದು ಭೂಕುಸಿತ ವರದಿಯಾಗಿದೆ.
ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಇಲ್ಲಿಯವರೆಗೆ, ಕನಿಷ್ಠ 200 ಜನರನ್ನು ಸ್ಥಳಾಂತರಿಸಲಾಗಿದೆ. ಭಿವಂಡಿ ತಾಲೂಕಿನಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಮಳೆ ಪ್ರವಾಹಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.