Friday, 13th December 2024

ಮುಖ್ಯಮಂತ್ರಿ ಹುದ್ದೆಯಿಂದ ಕೇಜ್ರಿವಾಲ್‌ ರನ್ನು ಇಳಿಸಿ: ಪಿಐಎಲ್‌ ವಜಾ

ವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟು, ಜೈಲುಶಿಕ್ಷೆಗೆ ಒಳಗಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್‌ ಅನ್ನು ಸುಪ್ರೀಂಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕೆಂದು ಕೋರಿ ಕಾಂತ್‌ ಭಾಟಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಜಸ್ಟೀಸ್‌ ಸಂಜೀವ್‌ ಖನ್ನಾ ಮತ್ತು ಜಸ್ಟೀಸ್‌ ದೀಪಂಕರ್‌ ದತ್ತಾ ಅವರನ್ನೊಳಗೊಂಡ ಪೀಠ, ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೇನಾ ಅವರು ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಅರ್ಜಿಗೆ ಯಾವುದೇ ಕಾನೂನು ಅರ್ಹತೆ ಇಲ್ಲ ಎಂದು ನ್ಯಾಯಾಲಯ ಹೇಳಿದ್ದು, ಅಂತಿಮವಾಗಿ ಇದೊಂದು ಔಚಿತ್ಯದ ವಿಷಯವಾಗಿದೆ ಎಂದು ತಿಳಿಸಿದೆ.

ರಾಜ್ಯಪಾಲರಿಗೆ ನಮ್ಮ ಮಾರ್ಗದರ್ಶನದ ಅಗತ್ಯವಿಲ್ಲ, ನಾವ್ಯಾರು ಅವರಿಗೆ ಸಲಹೆ ನೀಡಲ್ಲ. ಕಾನೂನಿನ ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಚೀಫ್‌ ಜಸ್ಟೀಸ್‌ ಮನಮೋಹನ್‌ ಹೇಳಿದರು.