Saturday, 14th December 2024

ರೆಪೋ, ರಿವರ್ಸ್ ರೆಪೋ ದರ ಯಥಾಸ್ಥಿತಿ: ಆರ್‌ಬಿಐ

ಮುಂಬೈ: ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬುಧವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ.

ಸೋಮವಾರದಿಂದ ನಡೆದ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನಾ ಸಭೆ ಬಳಿಕ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ. ರೆಪೋ ದರವನ್ನು ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇ.3.35ರಷ್ಟು ಉಳಿಸಿಕೊಂಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇಶದ 2021-22ರ ನೈಜ ಜಿಡಿಪಿ ಬೆಳವಣಿಗೆಯ ದರವನ್ನು ಶೇ.10.5ರಷ್ಟು ಉಳಿಸಿಕೊಳ್ಳಲಾಗಿದೆ ಎಂದು ಶಕ್ತಿಕಾಂತ ದಾಸ್ ಹೇಳಿ ದ್ದಾರೆ. ಕೋವಿಡ್ ವ್ಯಾಕ್ಸಿನೇಷನ್‌ಗೆ ಚಾಲನೆ ಮತ್ತು ಆರ್ಥಿಕ ಚಟುವಟಿಕೆಗಳ ಪುನರಾರಂಭದ ಹಿನ್ನೆಲೆಯಲ್ಲಿ ಜಾಗತಿಕ ಬೆಳವಣಿಗೆ ಕ್ರಮೇಣ ಜಗತ್ತಿನಾದ್ಯಂತ ಚೇತರಿಸಿಕೊಳ್ಳುತ್ತಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily