Thursday, 19th September 2024

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬಂಧನ

ಮುಂಬೈ/ದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿಯನ್ನು NCB (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ NCB ಮಂಗಳವಾರ ರಿಯಾ ಚಕ್ರವರ್ತಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದೆ. ನಟಿಯನ್ನು ಬಂಧಿಸಲು ನಾರ್ಕೋಟಿಕ್ಸ್ ಬ್ಯೂರೋಗೆ ಅನುಮತಿ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ವಿಡಿಯೋ ಕಾನ್ಫರೆನ್‌ಸ್‌ ಮೂಲಕ ರಿಯಾ ಚಕ್ರವರ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸುಶಾಂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ಪ್ರಕರಣವೊಂದು ಹೊರಬಿದ್ದ ನಂತರ ಸತತ ಮೂರನೇ ದಿನವೂ ಹೆಚ್ಚಿನ ವಿಚಾರಣೆಗಾಗಿ ಚಕ್ರವರ್ತಿ ಮುಂಬೈನ ಎನ್‌ಸಿಬಿ ಕಚೇರಿಗೆ ಹೋಗಿದ್ದರು.

ಸುಶಾಂತ್​ ಸಿಂಗ್​ ರಜಪೂತ್​ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋಯವರು (ಎನ್​ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್​ ಚಕ್ರವರ್ತಿ ಅವರನ್ನು ಗ್ರಿಲ್​ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್​ ಮಾಡಿದ್ದಾರೆ.

ಇದಕ್ಕೂ ಮುನ್ನ ರಿಯಾ, ಎನ್​ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್​ ಸೇವಿಸುತ್ತಿದ್ದಾಗಿ, ಸಿಗರೇಟ್​ನಲ್ಲಿ ಮಾರಿಜುವಾನಾ ಮಿಕ್ಸ್​ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್​ ಸಿಂಗ್​ ಸಹ ತಮ್ಮ ಜತೆಗೆ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು. ಕಳೆದ ವರ್ಷ ಬಿಡುಗಡೆ ಯಾದ ‘ಕೇದಾರನಾಥ್​’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್​ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು. ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *