Sunday, 15th December 2024

ನಟಿ ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು

ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿತ್ತು. ಪ್ರಕರಣದಲ್ಲಿ ಎನ್ ಡಿ ಪಿಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ನಟಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಚಕ್ರವರ್ತಿ ಗೆ ಜಾಮೀನು ನೀಡಲಾಗಿದೆ.

ಕಳೆದ ಸೆಪ್ಟೆಂಬರ್ ನಲ್ಲಿ ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿ ಯಾಗಿದ್ದರೆನ್ನಲಾಗಿ, ಎನ್ ಡಿ ಪಿ ಎಸ್ ಅಧಿಕಾರಿಗಳಿಂದ ಬಂಧನಕ್ಕೆ ನಟಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಚಕ್ರವರ್ತಿ ಯನ್ನು ಎನ್ ಡಿ ಪಿಎಸ್ ಅಧಿಕಾರಿಗಳು ಬಂಧಿಸಿದ್ದರು. ಇಂತಹ ಇವರಿಗೆ ನ್ಯಾಯಾಂಗ ಬಂಧನ ಕೂಡ ವಿಧಿಸಲಾಗಿತ್ತು.

ಪ್ರಕರಣದಲ್ಲಿ ಜಾಮೀನು ಕೋರಿ ಎನ್ ಡಿ ಪಿಎಸ್ ಕೋರ್ಟ್ ಗೆ ನಟಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಚಕ್ರವರ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನು ಮಂಜೂರು ಮಾಡಿದೆ.