Saturday, 14th December 2024

ದೆಹಲಿ-ಲಖನೌ ಎಕ್ಸ್​ಪ್ರೆಸ್​​ ಹೈವೇಯಲ್ಲಿ ರಸ್ತೆ ಅಪಘಾತ: ಆರು ಸಾವು

ಖನೌ: ಉತ್ತರಪ್ರದೇಶದ ಹಾಪುರ್​ ಜಿಲ್ಲೆಯಲ್ಲಿರುವ ದೆಹಲಿ-ಲಖನೌ ಎಕ್ಸ್​ಪ್ರೆಸ್​​ ಹೈವೇಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಎರಡು ಕಾರುಗಳು ಜಖಂಗೊಂಡಿದ್ದು, ಪೊಲೀಸರು ಮೃತದೇಹಗಳನ್ನು ಹೊರತೆಗೆಯುವುದಕ್ಕೆ ಹರಸಾಹಸಪಟ್ಟಿದ್ದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಹಾಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 09 ರ ಅಲ್ಲಾಭಕ್ಷಪುರ ಟೋಲ್ ಪ್ಲಾಜಾ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರು ಬರುತ್ತಿದ್ದ ಲಾರಿಗೆ ಗುದ್ದಿದೆ. ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಸ್ಥಿತಿ ಚಿಂತಾಜನಕವಾಗಿದೆ.

ಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರನ್ನು ಕಟ್​ ಮಾಡಿ ಮೃತದೇಹ ಹಾಗೂ ಗಾಯಾಳುಗಳನ್ನು ಹೊರತೆಗೆಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಜ್​ಕುಮಾರ್​ ಅಗರ್ವಾಲ್​ ತಿಳಿಸಿದ್ದಾರೆ.