Thursday, 19th September 2024

ರೋಹ್ಟಕ್’ನಲ್ಲಿ ಭೂಕಂಪನ

ರೋಹ್ಟಕ್ (ಹರಿಯಾಣ) : ಉತ್ತರ ಭಾರತದಲ್ಲಿ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಇದರ ತೀವ್ರತೆಯು 3.2 ಆಗಿತ್ತು.

ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಹರಿಯಾಣ ಮಾತ್ರವಲ್ಲದೇ, ಪಂಜಾಬ್, ದೆಹಲಿ ಮತ್ತು ಚಂಡೀಗಢದಲ್ಲಿ ಸಹ ಭೂಮಿ ಕಂಪಿಸಿದೆ.

ಭೂಕಂಪನದ ತೀವ್ರತೆ ಹೆಚ್ಚಿದ್ದರೆ ಹಾನಿ ಸಂಭವಿಸುತ್ತಿತ್ತು. ಆದರೆ, ತೀವ್ರತೆ ಕಡಿಮೆ ಇರುವುದ ರಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೂರು ಬಾರಿ ಭೂಕಂಪನದ ಅನುಭವ ವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿಯೂ ಲಘು ಕಂಪನ ಸಂಭವಿಸಿದ ಅನುಭವ ವಾಗಿತ್ತು.

ಇದಕ್ಕೂ ಮುನ್ನ ಜೂನ್ 13 ರಂದು ದೆಹಲಿ ಎನ್‌ಸಿಆರ್‌ನಲ್ಲಿಯೂ ಭೂಕಂಪನವಾಗಿತ್ತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.4 ಎಂದು ಅಂದಾಜಿಸಲಾಗಿತ್ತು. ಹಾಗೆಯೇ, ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್ ಮತ್ತು ಸುತ್ತಮುತ್ತಲಿನ ಎಲ್ಲ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿತ್ತು.