Friday, 13th December 2024

RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 11,558 ಹುದ್ದೆ ಭರ್ತಿಗೆ ಮುಂದಾದ ರೈಲ್ವೆ ರಿಕ್ರೂಟ್‌ಮೆಂಟ್‌ ಬೋರ್ಡ್‌

ಬೆಂಗಳೂರು: ಪದವಿ, ದ್ವಿತೀಯ ಪಿಯುಸಿ  ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗಾಗಿ ಭಾರತೀಯ ರೈಲ್ವೆ ಇಲಾಖೆ ಅತ್ಯುತ್ತಮ ಅವಕಾಶ ನೀಡುತ್ತಿದೆ.  ರೈಲ್ವೆ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ (RRB Recruitment 2024). ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದು. ಗಮನಿಸಿ, ಅರ್ಜಿ ಸಲ್ಲಿಕೆ ಸೆಪ್ಟೆಂಬರ್‌ 14ರಂದು ಆರಂಭವಾಗಲಿದ್ದು, ಕೊನೆಯ ದಿನ ಅಕ್ಟೋಬರ್‌ 20 (Job Guide). ಉದ್ಯೋಗ ಸ್ಥಳ: ಭಾರತಾದ್ಯಂತ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಗೂಡ್ಸ್ ಟ್ರೈನ್ ಮ್ಯಾನೇಜರ್ – 3,144 ಹುದ್ದೆ, ವಿದ್ಯಾರ್ಹತೆ: ಪದವಿ
ಸ್ಟೇಷನ್ ಮಾಸ್ಟರ್ – 994 ಹುದ್ದೆ, ವಿದ್ಯಾರ್ಹತೆ: ಪದವಿ
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ – 1,736 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್ – 1,507 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ – 732 ಹುದ್ದೆ, ವಿದ್ಯಾರ್ಹತೆ: ಪದವಿ
ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ – 361 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ)
ಕಮರ್ಷಿಯಲ್ ಮತ್ತು ಟಿಕೆಟ್ ಕ್ಲರ್ಕ್ – 2,022 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ)
ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ – 990, ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ)
ರೈಲ್ವೆ ಕ್ಲರ್ಕ್ – 72ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ)

ಅರ್ಜಿ ಸಲ್ಲಿಕೆಯ ದಿನಾಂಕ

ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಸೆಪ್ಟೆಂಬರ್‌ 14ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್, ಕಮರ್ಷಿಯಲ್ ಮತ್ತು ಟಿಕೆಟ್ ಕ್ಲರ್ಕ್, ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ ಹಾಗೂ ರೈಲ್ವೆ ಕ್ಲರ್ಕ್ ಹುದ್ದೆಗಳಿಗೆ ಸೆಪ್ಟೆಂಬರ್‌ 21ರಿಂದ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ/ ಮಾಜಿ ಯೋಧರು / ಇಬಿಎಸ್‌ / ಪಿಡಬ್ಲ್ಯುಬಿಡಿ / ಮಹಿಳೆಯರು / ಅಲ್ಪ ಸಂಖ್ಯಾತರು / ತೃತೀಯ ಲಿಂಗಿಗಳು 250 ರೂ. ಮತ್ತು ಉಳಿದ ಅಭ್ಯರ್ಥಿಗಳು 500 ರೂ. ಪಾವತಿಸಬೇಕು.

ವಯೋಮಿತಿ ಮತ್ತು ಆಯ್ಕೆ ವಿಧಾನ

18ರಿಂದ 36 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಸಿಬಿಟಿ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Online application

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.rrbapply.gov.in/#/auth/landing).
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಕ್ಕೆ ಭೇಟಿ ನೀಡಿ.