Wednesday, 30th October 2024

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್’ರಿಗೆ ಕೊರೋನಾ ಸೋಂಕು

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾಗವತ್ ಅವರನ್ನು ಕೋವಿಡ್ -19 ವಾರ್ಡ್‌ಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.