Friday, 20th September 2024

ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ರ‍್ಯಾಲಿಗೆ ತಮಿಳುನಾಡಿನಲ್ಲಿ ನಿಷೇಧ

ಚೆನ್ನೈ: ಕ್ಟೋಬರ್ 2 ರಂದು ( ಗಾಂಧಿ ಜಯಂತಿ) ತಮಿಳುನಾಡಿನಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರ್ಯಾಲಿಗಳನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಕೆಲವು ನಿರ್ಬಂಧಗಳೊಂದಿಗೆ ಆರ್‌ಎಸ್‌ಎಸ್ ರ್ಯಾಲಿಗಳಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರವೂ ಸರ್ಕಾರವು ಅನುಮತಿ ನಿರಾಕರಿಸಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅನ್ನು ಕೇಂದ್ರವು ನಿಷೇಧಿಸಿರುವುದರಿಂದ ಮುಸ್ಲಿಂ ಸಂಘಟನೆಗಳು ಹಲವಾರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಗಳು ಅಥವಾ ಸಭೆಗಳನ್ನು ನಡೆಸಲು ಆರ್‌ಎಸ್‌ಎಸ್ ಅಥವಾ ಯಾವುದೇ ಸಂಸ್ಥೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಇದಕ್ಕೂ ಮುನ್ನ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಮತ್ತು ನಾಮ್ ತಮಿಝರ್ ಕಚ್ಚಿ ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದವು.

ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರವು ನ್ಯಾಯಾಂಗ ನಿಂದನೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದೆ. ನಾಳೆ ಪ್ರಕರಣದ ವಿಚಾರಣೆ ನಡೆಯಲಿದೆ.