Thursday, 3rd October 2024

ನ.7-8 ರಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ರಷ್ಯಾಗೆ ಭೇಟಿ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ರಷ್ಯಾಗೆ ಭೇಟಿ ನೀಡಲಿದ್ದಾರೆ. ನ.7-8 ರಂದು ಜೈಶಂಕರ್ ರಷ್ಯಾಗೆ ಭೇಟಿ ನೀಡಲಿದ್ದಾರೆ.
ಉಕ್ರೇನ್ ಸಂಘರ್ಷದ ನಡುವೆಯೇ ಈ ಭೇಟಿ ಕುತೂಹಲ ಮೂಡಿಸಿದೆ. ರಷ್ಯಾ ವಿದೇ ಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಜೈಶಂಕರ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜೈಶಂಕರ್ ಭೇಟಿಯನ್ನು ವಿದೇಶಾಂಗ ಇಲಾಖೆ ದೃಢಪಡಿಸಿದೆ.
ಪಶ್ಚಿಮದ ರಾಷ್ಟ್ರಗಳ ವಿರೋಧದ ನಡುವೆಯೂ ಭಾರತ ರಷ್ಯಾದಿಂದ ಕಳೆದ ಕೆಲವು ತಿಂಗಳುಗಳಲ್ಲಿ ಕಚ್ಚಾ ತೈಲದ ಆಮದನ್ನು ರಿಯಾಯಿತಿ ದರದಲ್ಲಿ ಮಾಡಿಕೊಳ್ಳುತ್ತಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಪ್ರಾರಂಭವಾದಾಗಿನಿಂದ ಜೈಶಂಕರ್ ಅವರು ರಷ್ಯಾ ವಿದೇಶಾಂಗ ಸಚಿವರನ್ನು 4 ಬಾರಿ ಭೇಟಿ ಮಾಡಿದ್ದಾರೆ.
ಏಪ್ರಿಲ್ ನಲ್ಲಿ ರಷ್ಯಾ ಸಚಿವರೂ ಸಹ ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.