ಮುಂಬೈನ ‘ಚಾಲ್’ ಮರು ಅಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ದಲ್ಲಿ ಆ.1 ರಂದು ಜಾರಿ ನಿರ್ದೇಶನಾಲಯವು ರಾವುತ್ ಅವರನ್ನು ಬಂಧಿಸಿತ್ತು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಎಂಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಕೋರಿಕೆ ಯನ್ನು ಮುಂಬೈ ವಿಶೇಷ ನ್ಯಾಯಾಧೀಶ ಎಂಜಿ ದೇಶಪಾಂಡೆ ಅವರು ನಿರಾಕರಿಸಿ ದ್ದಾರೆ.
ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ ಆರು ಗಂಟೆಗಳ ಕಾಲ ಇಡಿ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಪಿಎಂಎಲ್‌ಎ ಅಡಿಯಲ್ಲಿ ಅವರನ್ನು ಬಂಧಿಸಲಾಯಿತು. ಇದೇ ವೇಳೆ ರಾವತ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಇಡಿ ಆರೋಪಿಸಿದೆ.