ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಸೋಮವಾರ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನಕ್ಕೆ ಬುಕ್ಕಿಂಗ್ ಮಾಡಿಸಿದ್ದಾರೆ.
ಅಧಿಕಾರಿಗಳ ಪ್ರಕಾರ 1,07,260 ಭಕ್ತರು ಸೋಮವಾರದ ದರ್ಶನಕ್ಕೆ ಬುಕ್ಕಿಂಗ್ ಕಾಯ್ದಿರಿಸಿ ದ್ದಾರೆ. ಈ ಹಿನ್ನೆಲೆ ಕಾಲ್ತುಳಿತ ಉಂಟಾ ಗುವ ಸಾಧ್ಯತೆ ಪರಿಗಣಿಸಿ ಸೂಕ್ತವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಭಕ್ತರನ್ನು ಪಂಪಾದಿಂದ ಅಯ್ಯಪ್ಪನ ಸನ್ನಿಧಾನಕ್ಕೆ ನಿಯಂತ್ರಿತ ಮತ್ತು ವಿಭಾಗಗಳಲ್ಲಿ ಕರೆತರಲಾಗುವುದು. ಇದಕ್ಕಾಗಿ ಪ್ರತಿ ಹಂತದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸ ಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸರತಿ ಸಾಲಿನಲ್ಲಿ ನಿಂತಿರುವ ಭಕ್ತರಿಗೆ ಲಘು ಆಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಟ್ರಾಫಿಕ್ ನಿಯಂತ್ರಣ ಕ್ಕೆ ಪೊಲೀಸರಲ್ಲದೆ ಆರ್ಎಎಫ್ ಮತ್ತು ಎನ್ಡಿ ಆರ್ಎಫ್ ಸಿಬ್ಬಂದಿಯ ಸೇವೆಯನ್ನೂ ಬಳಸಿಕೊಳ್ಳಲಾಗುವುದು” ಎಂದು ಶಬರಿಮಲೆ ವಿಶೇಷ ಅಧಿಕಾರಿ ಹರಿಶ್ಚಂದ್ರ ನಾಯ್ಕ್ ತಿಳಿಸಿದ್ದಾರೆ.
ದಾಖಲೆ ಬುಕ್ಕಿಂಗ್ ಆಗಿರುವ ಕಾರಣ ದರ್ಶನದ ಸಮಯವನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಶಬರಿಮಲೆ ದರ್ಶನಕ್ಕೆ ಡಿ.13 ರಂದು ಸುಮಾರು 77,216 ಮತ್ತು ಡಿ.14 ರಂದು 64,617 ಜನರು ಆನ್ಲೈನ್ನಲ್ಲಿ ಬುಕ್ ಮಾಡಿದ್ದಾರೆ. ಶನಿವಾರ ಸಂಜೆ 5 ಗಂಟೆಯ ವರೆಗೆ ಸುಮಾರು 60,000 ಜನರು ಬುಕ್ಕಿಂಗ್ ಮಾಡಿದ್ದಾರೆ.