Friday, 22nd November 2024

Sabarimala temple: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ!

sabarimala

ಪತ್ತನಂತಿಟ್ಟ: ಈ ಬಾರಿ ಶಬರಿಮಲೆ ಯಾತ್ರೆ(Sabarimala temple)ಗೆ ಆನ್‌ಲೈನ್‌ ಬುಕ್ಕಿಂಗ್‌(Online Booking) ಕಡ್ಡಾಯಗೊಳಿಸಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ಪಿಣರಾಯ್‌ ವಿಜಯನ್‌ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ.

ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ್ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ಚುವಲ್ ಕ್ಯೂ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ. ಹೀಗಾಗಿ ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.

ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ವಾಹನ ನಿಲುಗಡೆಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಶಬರಿಮಲೆಗೆ ಹೋಗುವ ರಸ್ತೆಗಳು ಮತ್ತು ಪಾರ್ಕಿಂಗ್ ಮೈದಾನಗಳ ದುರಸ್ತಿ ಕಾರ್ಯಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಇನ್ನು ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಪ್ರತಿಕ್ರಿಯಿಸಿದ್ದು, ಶಬರಿಮಲೆಗೆ ಬರುವ ಯಾತ್ರಾರ್ಥಿಗಳ ಅಧಿಕೃತ ದಾಖಲೆಗಳು ಲಭ್ಯವಿರಬೇಕು. ಯಾತ್ರಾರ್ಥಿಗಳ ಮಾಹಿತಿ ಮೊದಲೇ ತಿಳಿಯಬೇಕಾದ ಪರಿಸ್ಥಿತಿಯೂ ಇದೆ. ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಬೇಕಿದೆ. ಹಿಂದಿನ ಸ್ಪಾಟ್ ಬುಕಿಂಗ್ ವ್ಯವಸ್ಥೆಯನ್ನು ತೆಗೆದುಹಾಕುವ ಮೂಲಕ, ಶಬರಿಮಲೆಯಲ್ಲಿ ಆನ್‌ಲೈನ್ ಬುಕಿಂಗ್ ಅನ್ನು ಮಾತ್ರ ಮಾಡಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ್ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ಬಾರಿ ಶಬರಿಮಲೆಯಲ್ಲಿ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ದಿನಕ್ಕೆ ಗರಿಷ್ಠ 80,000 ಜನರಿಗೆ ದರ್ಶನ ಸೌಲಭ್ಯ ಕಲ್ಪಿಸಲಾಗುವುದು.

ಈ ಸುದ್ದಿಯನ್ನೂ ಓದಿ: Sabarimala Temple Open Date: ವಿಶ್ವ ವಿಖ್ಯಾತ ಶಬರಿಮಲೆ ದೇಗುಲ ನಾಳೆ ಓಪನ್‌; ಭಕ್ತರಿಗೆ ದಿವ್ಯ ಅವಕಾಶ