Friday, 13th December 2024

ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕೈ ನಾಯಕ ಸಚಿನ್ ಪೈಲಟ್ ಬಂಧನ

ಲಖನೌ : ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬಂಧಿಸಲಾಗಿದೆ.

ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಆಚಾರ್ಯ ಪ್ರಮೋದ್ ಅವರನ್ನು ಮೊರಾದಾಬಾದ್ ನಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಇನ್ನೂ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರೈತರ ಕುಟುಂಬಗಳನ್ನು ಭೇಟಿ ಮಾಡಲು ಸೀತಾಪುರದಿಂದ ಲಖಿಂಪುರ್ ಖೇರಿಗೆ ತೆರಳಿದ್ದಾರೆ. ಆಮ್ ಆದ್ಮಿ ಪಕ್ಷದ ನಿಯೋಗ ಕೂಡ ಈಗಾಗಲೇ ಸ್ಥಳಕ್ಕೆ ತಲುಪಿದೆ.