Sunday, 15th December 2024

ನಾಮಪತ್ರ ಸಲ್ಲಿಸಿದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಟೊಂಕ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ನವೆಂಬರ್‌ 25ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

2018ರ ವಿಧಾನಸಭಾ ಚುನಾವಣೆಯಲ್ಲೂ ಪೈಲಟ್‌ ಟೊಂಕ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಯೂನುಸ್‌ ಖಾನ್‌ ಅವರನ್ನು 54 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ನಾಮಪತ್ರ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದ್ದು, ಸಚಿನ್ ಪೈಲಟ್ ವಿರುದ್ಧ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.