Sunday, 15th December 2024

ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ದಾಳಿ

ಚಂಡೀಗಢ: ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಗುಂಪೊಂದು ದಾಳಿ ಮಾಡಿದೆ.

ಪಂಜಾಬ್​ನ ಜಲಾಲಾಬಾದ್​ನಲ್ಲಿ ಈ ಘಟನೆ ಸಂಭವಿಸಿದೆ. ಪಂಜಾಬ್‌ನಲ್ಲಿ ಪುರಸಭೆ ಚುನಾವಣೆ ನಡೆಯುತ್ತಿದ್ದು, ಜಲಾಲಾ ಬಾದ್‌ನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಸುಖ್ಬೀರ್ ಸಿಂಗ್ ಜಬಲ್‌ಪುರ್‌ಗೆ ಆಗಮಿಸಿದ್ದರು.

ಈ ವೇಳೆ ಗುಂಪೊಂದು ಏಕಾಏಕಿ ಸುಖ್ಬೀರ್ ಸಿಂಗ್ ಕಾರಿನ ಮೇಲೆ ದಾಳಿ ಮಾಡಿದೆ. ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಬಾದಲ್ ಕಾರು ಸ್ಥಳದಿಂದ ಕದಲದಂತೆ ಎಲ್ಲಾ ದಿಕ್ಕುಗಳಿಂದಲೂ ದಾಳಿ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.