Wednesday, 9th October 2024

ಸಾಕೇತ್ ಗೋಖಲೆ ಬಂಧನ: ಡೆರಿಕ್ ಓ ಬ್ರಿಯಾನ್ ಆರೋಪ

ಅಹಮದಾಬಾದ್: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಯವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಪಕ್ಷದ ರಾಜ್ಯಸಭಾ ಸದಸ್ಯ ಡೆರಿಕ್ ಓ ಬ್ರಿಯಾನ್ ಆರೋಪಿಸಿದ್ದಾರೆ.

ಸಾಕೇತ್ ಗೋಖಲೆ ನವದೆಹಲಿ ವಿಮಾನ ನಿಲ್ದಾಣದಿಂದ ತೆರಳಿದ್ದು, ಜೈಪುರ ವಿಮಾನ ನಿಲ್ದಾಣದಲ್ಲಿ ಕಾದು ನಿಂತಿದ್ದ ಗುಜರಾತ್ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಡೆರಿಕ್ ಟ್ವೀಟ್ ಮಾಡಿದ್ದಾರೆ.

ಗುಜರಾತಿನ ಮೋರ್ಬಿ ತೂಗು ಸೇತುವೆ ಕುಸಿದು ಬಿದ್ದ ಕುರಿತಂತೆ ಸಾಕೇತ್ ಟ್ವೀಟ್ ಮಾಡಿದ್ದರ ಹಿನ್ನೆಲೆಯಲ್ಲಿ ಗುಜರಾತ್ ಪೊಲೀಸರು ಸುಳ್ಳು ಕಥೆ ಕಟ್ಟಿ ಅವರನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.