Wednesday, 11th December 2024

Salim Khan Threat Case: ʻಬಿಷ್ಣೋಯ್‌ಯನ್ನು ಕರೆಯಲೇ..ʼ- ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ- ಬುರ್ಖಾಧಾರಿ ಮಹಿಳೆ ಅರೆಸ್ಟ್‌

salim Khan threat

ಮುಂಬೈ: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌(Lawrence Bishnoi) ಹಿಟ್‌ಲಿಸ್ಟ್‌ನಲ್ಲಿರುವ ನಟ ಸಲ್ಮಾನ್‌ ಖಾನ್‌(Salman Khan) ಕುಟುಂಬಕ್ಕೆ ಮತ್ತೆ ಬೆದರಿಕೆ(life threat) ಬಂದಿದೆ. ಸಲ್ಮಾನ್‌ ಖಾನ್‌ ಅವರ ತಂದೆ ಸಲೀಂ ಖಾನ್‌(Salim Khan Threat Case) ಅವರಿಗೆ ಮಹಿಳೆಯೊಬ್ಬಳು ನಡುರಸ್ತೆಯಲ್ಲೇ ಜೀವ ಬೆದರಿಕೆವೊಡ್ಡಿರುವ ಘಟನೆ ವರದಿಯಾಗಿದೆ. ಸದ್ಯ ಮಹಿಳೆಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಏನಿದು ಘಟನೆ?

ಮುಂಬೈಯ ಬಾಂದ್ರಾ ಬಳಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸಲೀಂ ಖಾನ್‌ ವಾಯು ವಿಹಾರಕ್ಕೆಂದು ತೆರಳಿದ್ಧಾಗ ಮಹಿಳೆಯೊಬ್ಬರು ಲಾರೆನ್ಸ್‌ ಬಿಷ್ಣೋಯ್‌ ಹೆಸರು ಹೇಳಿಕೊಂಡು ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಪೊಲೀಸರಿಗೆ ನೀಡಲಾಗಿರುವ ದೂರಿನ ಪ್ರಕಾರ ಸಲೀಂ ಖಾನ್‌ ವಾಯಯ ವಿಹಾರಕ್ಕೆಂದು ತೆರಳಿದ್ದರು. ಕೆಲ ಹೊತ್ತಿನ ಬಳಿಕ ಸುಸ್ತಾಯಿತೆಂದು ವಿಂಡರ್‌ಮೇರ್‌ ಕಟ್ಟಡದ ಎದುರು ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಅಲ್ಲಿಗೆ ಬಂದ ಬುರ್ಖಾ ಧರಿಸಿದ್ದ ಮಹಿಳೆ, ಸಲೀಂ ಖಾನ್‌ ಅವರನ್ನು ಚೇಡಿಸಲು ಶುರು ಮಾಡಿದ್ದಾಳೆ.

ಗ್ಯಾಲಕ್ಸಿಯಿಂದ ಬಾಂ‍ದ್ರಾ ಸ್ಟೇಷನ್‌ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ ಅಚಾನಕ್ಕಾಗಿ ಸಲೀಂ ಖಾನ್‌ನನ್ನು ಕಂಡು ಯೂಟರ್ನ್‌ ಮಾಡಿಕೊಂಡು ಬಂದಿದೆ. ಸಲೀಂ ಖಾನ್‌ ಸಮೀಪ ಸ್ಕೂಟರ್‌ ಪಾರ್ಕ್‌ ಮಾಡಿ ಅವರಿಗೆ ಜೀವ ಬೆದರಿಕೆವೊಡ್ಡಿದ್ದಾರೆ. ಬಿಷ್ಣೋಯ್‌ ಗ್ಯಾಂಗ್‌ ಅನ್ನು ಕರಿಯಲೇ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಬೆದರಿಕೆವೊಡ್ಡಿ ಕಿಡಿಗೇಡಿಗಳು ಸ್ಥಳದಿಂದ ಎಸ್ಕೇಪ್‌ ಆಗಿದ್ದಾರೆ. ಆರೋಪಿಗಳು ಸ್ಕೂಟರ್‌ ಸಂಖ್ಯೆ 7444 ಬಂದಿದ್ದರು ಎನ್ನಲಾಗಿದೆ.

ಇನ್ನು ಸಲೀಂ ಖಾನ್‌ ನೀಡಿರುವ ದೂರಿನಾಧಾರದಲಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿ ಮಹಿಳೆಯನ್ನು ಅರೆಸ್ಟ್‌ ಮಾಡಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಏಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?
ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಈ ಸುದ್ದಿಯನ್ನೂ ಓದಿ: Ambani’s Ganesh Chaturthi: ಸಲ್ಮಾನ್‌ ಖಾನ್‌ ಹೆಗಲ ಮೇಲೆ ಕೈ ಹಾಕಿದ ಅನಂತ್‌ ಅಂಬಾನಿ; ವೀಡಿಯೊ ಇಲ್ಲಿದೆ