Friday, 29th November 2024

Sambhal Violence: ಸಂಭಾಲ್‌ ಮಸೀದಿ ಸರ್ವೆಗೆ ಸುಪ್ರೀಂ ಕೋರ್ಟ್‌ ತಡೆ

Supreme Court

ನವದೆಹಲಿ: ಉತ್ತರ ಪ್ರದೇಶದಲ್ಲಿ ಮಸೀದಿ ಸಮೀಕ್ಷೆಯನ್ನು(Mosque Survey) ವಿರೋಧಿಸಿ ನಡೆದ ಸಂಭಾಲ್ ಹಿಂಸಾಚಾರಕ್ಕೆ (Sambhal Violence) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌(Supreme Court)ನಲ್ಲಿ ಇಂದು ವಿಚಾರಣೆ ನಡೆದಿದ್ದು, ಜಾಮಾ ಮಸೀದಿ ಸಮೀಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ. ನವೆಂಬರ್ 19ರ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಮುಸ್ಲಿಂ ಬಣಕ್ಕೆ ಸೂಚಿಸಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನವೆಂಬರ್ 29 ರ ಕಾರಣ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಇಂದು ನಡೆಸಿದೆ. ಪ್ರಾಚೀನ ಹರಿಹರ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ವಿಚಾರಣೆ ನಡೆಸಿದ ಸಿಜೆಐ, ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇನ್ನು ಈ ಬಗ್ಗೆ ಹಿಂದೂ ಪರವಾದ ವಿಷ್ಣು ಶಂಕರ್ ಜೈನ್ ಮಾತನಾಡಿ, ಹೈಕೋರ್ಟ್ ಅನ್ನು ಸಂಪರ್ಕಿಸಲು ಸುಪ್ರೀ ಕೋರ್ಟ್‌ ಮಸೀದಿ ಸಮಿತಿಗೆ ಸೂಚಿಸಿದೆ. ಅವರು ಹೈಕೋರ್ಟ್ ಅನ್ನು ಸಂಪರ್ಕಿಸುವವರೆಗೆ ಮತ್ತು ವಿಷಯವನ್ನು ಪಟ್ಟಿ ಮಾಡುವವರೆಗೆ, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಏನಿದು ಘಟನೆ?

ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇಗೆ ಜಿಲ್ಲಾ ನ್ಯಾಯಾಲಯ ಆದೇಶ ನೀಡಿತ್ತು. ನಂತರ ಅಲ್ಲಿ ಹಿಂಸಾಚಾರ ಭುಗಿಲೆದ್ದಿತು. ಸರ್ವೆಗೆ ಅನುಮತಿ ನೀಡಿ ಒಂದು ದಿನದೊಳಗೆ ಸಮೀಕ್ಷೆಯನ್ನು ನಡೆಸಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ಸರ್ವೇ ಕಾರ್ಯ ನಡೆಸುತ್ತಿರುವ ಸಂದರ್ಭದಲ್ಲಿ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ಐವರು ಮೃತಪಟ್ಟಿದ್ದು, ಪೊಲೀಸರು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Sambhal Violence: ಸಂಭಾಲ್‌ ಹಿಂಸಾಚಾರ; ದಂಗೆಕೋರರ ಫೋಟೊ ಬೀದಿ ಬೀದಿಗಳಲ್ಲಿ ಪ್ರಕಟ-ಗಲಭೆಕೋರರಿಂದಲೇ ನಷ್ಟ ವಸೂಲಿ!