ಅಬಕಾರಿ ನೀತಿಗೆ ಸಂಬಂಧಿಸಿ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿದೆ.
ಟೆಂಡರ್ ನಂತರದ ಸನ್ನದುದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ಅಬಕಾರಿ ನೀತಿಯನ್ನು ರೂಪಿಸಲಾಗಿತ್ತು.
‘ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅಂದಿನ ಅಬಕಾರಿ ಆಯುಕ್ತ ಅರ್ವಾ ಗೋಪಿ ಕೃಷ್ಣ, ಅಬಕಾರಿ ಇಲಾಖೆಯ ಅಂದಿನ ಉಪ ಆಯುಕ್ತ ಆನಂದ್ ತಿವಾರಿ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ಪಂಕಜ್ ಭಟ್ನಾಗರ್ ಅಬಕಾರಿ ನೀತಿಗೆ ಸಂಬಂಧಿಸಿದ ಶಿಫಾರಸು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
2021-22ನೇ ಸಾಲಿನ ಅಬಕಾರಿ ನೀತಿಯನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಟೆಂಡರ್ ನಂತರ ಪರವಾನಗಿ ದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ.
ಹಣವನ್ನು ಬೇರೆಡೆ ವರ್ಗಾಯಿಸಲು, ಸರ್ಕಾರಿ ಸೇವೆಯಲ್ಲಿದ್ದ ಕೆಲ ಮಂದಿಗೆ ತಲುಪಿಸಲು ಎಲ್-1 ಪರವಾನಗಿದಾರರು ಚಿಲ್ಲರೆ ಮಾರಾಟಗಾರರಿಗೆ ‘ಕ್ರೆಡಿಟ್ ನೋಟ್’ಗಳನ್ನು ನೀಡುತ್ತಿದ್ದರು. ದಾಖಲೆಗಳನ್ನು ತಿರುಚಲು ಖಾತೆಗಳ ಪುಸ್ತಕಗಳಲ್ಲಿ ತಪ್ಪು ಲೆಕ್ಕ ತೋರಿಸುತ್ತಿದ್ದರು ಎಂದೂ ಆರೋಪಿಸಲಾಗಿದೆ.