ಸಮೃದ್ಧಿ ಮಹಾಮಾರ್ಗ್ ಅಥವಾ ನಾಗ್ಪುರ-ಮುಂಬೈ ಸೂಪರ್ ಕಮ್ಯುನಿಕೇಶನ್ ಎಕ್ಸ್‌ಪ್ರೆಸ್‌ವೇ ಯೋಜನೆಯು ದೇಶದಾದ್ಯಂತ ಸುಧಾರಿತ ಸಂಪರ್ಕ ಮತ್ತು ಮೂಲ ಸೌಕರ್ಯಗಳ ಪ್ರಧಾನಮಂತ್ರಿಯವರ ದೃಷ್ಟಿಯನ್ನು ಸಾಕಾರಗೊಳಿಸುವ ಪ್ರಮುಖ ಹೆಜ್ಜೆಯಾಗಿದೆ.
701 ಕಿಮೀ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು 55,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸ ಲಾಗುತ್ತಿದ್ದು, ಇದು ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇಗಳಲ್ಲಿ ಒಂದಾಗಿದೆ. ಇದು ಮಹಾರಾಷ್ಟ್ರದ 10 ಜಿಲ್ಲೆಗಳು ಮತ್ತು ಅಮರಾವತಿ, ಔರಂಗಾಬಾದ್ ಮತ್ತು ನಾಸಿಕ್‌ನ ಪ್ರಮುಖ ನಗರ ಪ್ರದೇಶಗಳ ಮೂಲಕ ಹಾದುಹೋಗುತ್ತದೆ. ಅಷ್ಟೇ ಅಲ್ಲದೇ, ಎಕ್ಸ್‌ಪ್ರೆಸ್‌ವೇ ಪಕ್ಕದ 14 ಜಿಲ್ಲೆಗಳ ಸಂಪರ್ಕವನ್ನು ಸುಧಾರಿಸಲು ಸಹಾಯ ಮಾಡುತ್ತದ.
ಸಮೃದ್ಧಿ ಮಹಾಮಾರ್ಗ್ ದೆಹಲಿ ಮುಂಬೈ ಎಕ್ಸ್‌ಪ್ರೆಸ್‌ವೇ, ಜವಾಹರ್‌ಲಾಲ್ ನೆಹರು ಪೋರ್ಟ್ ಟ್ರಸ್ಟ್, ಮತ್ತು ಅಜಂತಾ ಎಲ್ಲೋರಾ ಗುಹೆಗಳು, ಶಿರಡಿ, ವೆರುಲ್, ಮಹಾರಾಷ್ಟ್ರ, ಲೋನಾರ್ ಮುಂತಾದ ಪ್ರವಾಸಿ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಪ್ರಧಾನಮಂತ್ರಿಯವರು ‘ನಾಗ್ಪುರ ಮೆಟ್ರೋ ಹಂತ I’ನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.