Tuesday, 10th September 2024

ಮಧ್ಯಾಹ್ನದ ಊಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಸಂಗ್ರೂರ್: ಸಂಗ್ರೂರಿನ ಗಬ್ಡಾದಲ್ಲಿರುವ ಮೆರಿಟೋರಿಯಸ್ ಶಾಲೆಯ ವಸತಿ ನಿಲಯದಲ್ಲಿ ಮಕ್ಕಳಿಗೆ ಕಳಪೆ ಆಹಾರವನ್ನು ನೀಡಲಾಗಿದೆ.

ಸುಮಾರು 35ಕ್ಕೂ ಹೆಚ್ಚು ಮಕ್ಕಳು ಈ ಆಹಾರವನ್ನು ಸೇವನೆ ಮಾಡಿ ಅಸ್ವಸ್ಥರಾಗಿದ್ದಾರೆ. ಮಕ್ಕಳ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು ಖಂಡಿಸಿ ಅಸ್ವಸ್ಥಗೊಂಡ ಮಕ್ಕಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೀಪಾವಳಿ ಹಬ್ಬದಿಂದ ಈವರೆಗೆ ಮಕ್ಕಳಿಗೆ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ.

”ಸರ್ಕಾರದಿಂದ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡುವುದು ಒಳ್ಳೆಯದು. ಆದರೆ, ಅವರಿಗೆ ಯಾವ ರೀತಿಯ ಆಹಾರವನ್ನು ನೀಡಲಾಗುತ್ತದೆ ಎಂಬುದರ ಬಗ್ಗೆ ಗಮನ ಹರಿಸುತ್ತಿಲ್ಲ. ಸಂಗ್ರೂರಿನ ಮೆರಿಟೋರಿಯಸ್ ಶಾಲೆಯಲ್ಲಿ ಕಳಪೆ ಗುಣಮಟ್ಟದ ಊಟ ವಿತರಣೆ ಮಾಡಿರುವುದು ಸರಿಯಲ್ಲ. ಅದೇ ಆಹಾರವನ್ನು ಸವಿದ 35ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಅವರನ್ನು ಸಂಗ್ರೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಶಾಲಾ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕು” ಎಂದು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.

”ನಮಗೆ ಸರಿಯಾದ ಆಹಾರ ನೀಡಿಲ್ಲ. ಇದರಿಂದ ನಾವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇವೆ. ಈ ಬಗ್ಗೆ ಹಲವು ಬಾರಿ ಶಾಲಾ ಆಡಳಿತದ ಗಮನಕ್ಕೆ ತಂದಿದ್ದೇವೆ. ನಮಗೆ ಇಂದು ಬೆಳಗ್ಗೆ ವಾಂತಿಬೇದಿ ಕಾಣಿಸಿಕೊಂಡಿದ್ದು, ಸಂಗ್ರೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಕ್ಕಳು ಹೇಳಿದರು.

Leave a Reply

Your email address will not be published. Required fields are marked *