Friday, 13th December 2024

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು; ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಭಾನುವಾರ ವಿಕ್ಟೋರಿಯಾ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಕ್ರಮ ಆಸ್ತಿ‌ ಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ ಜ.27ರಂದು ಬಿಡುಗಡೆಯಾಗಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ದ್ದರು.

ಇನ್ನು ಶಶಿಕಲಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಅವರಿಗೆ ರಕ್ಷಣೆ ನೀಡಲೆಂದು 10 ಜನ ಚೆನ್ನೈನಿಂದ ಪ್ರೈವೇಟ್ ಎಸ್ಕಾರ್ಟ್ ಗಳು ಆಗಮಿಸಿದ್ದಾರೆ. ಆಸ್ಪತ್ರೆ ಸುತ್ತ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಯಾಗಿರುವ ಚಿನ್ನಮ್ಮ ಬೆಂಬಲಿಗರು, ಕುಟುಂಬದವರು ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರಳಿದ್ದಾರೆ.