ನವದೆಹಲಿ: ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜುಲೈ 31 ರೊಳಗೆ ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲ ಮಾಡಿ ಕೊಡಲು ಎನ್‌ಐಸಿಯ ಸಹಾಯದಿಂದ ಜುಲೈ 31 ರೊಳಗೆ ಪೋರ್ಟಲ್ ಅಭಿವೃದ್ಧಿಪಡಿಸುವಂತೆ ಸೂಚನೆ ನೀಡಿದೆ. ಕೋವಿಡ್ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್, ಕೇಂದ್ರಕ್ಕೆ ನಿರ್ದೇಶನ ನೀಡಿದೆ. ವಲಸೆ ಕಾರ್ಮಿಕರಿಗೆ ಪಡಿತರ ನೀಡುವ ಯೋಜನೆಯನ್ನು ರಾಜ್ಯ ಜಾರಿಗೆ ತರಬೇಕೆಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ, ವಿಚಾರಣೆ ನಡೆಸಿದೆ.