Wednesday, 11th December 2024

ಹಿಜಾಬ್ ವಿವಾದ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

ನವದೆಹಲಿ: ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ( Hijab Row ) ವರ್ಸಸ್ ಕೇಸರಿ ಶಾಲು ವಿವಾದದ ಕುರಿತಂತೆ, ಈಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್ ಹಿಜಾಬ್ ವಿವಾದದ ಬಗ್ಗೆ ಮಧ್ಯಪ್ರವೇಶಿಸಲು ನಿರಾಕರಿಸಿದೆ.

 ಸುಪ್ರೀಂ ಕೋರ್ಟ್ ನಲ್ಲಿ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರನ್ನೊಳ ಗೊಂಡ ನ್ಯಾಯಪೀಠವು, ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆಯ ತೀರ್ಪು ಬರಲಿ. ಆನಂತರ ನೋಡೋಣ. ಸದ್ಯಕ್ಕೆ ಮದ್ಯಪ್ರವೇಶಿಸಲು ಆಗುವುದಿಲ್ಲ ಎಂಬುದಾಗಿ ತಿಳಿಸಿದೆ.

ಗುರುವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಂತ ತ್ರಿ ಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ ಹಿಜಾಬ್ ಅನುಮತಿ ಕೋರಿದಂತ ಅರ್ಜಿಯ ವಿಚಾರಣೆ ನಡೆಯಲಿದೆ. ಈಗಾಗಿ ಎಲ್ಲರ ಚಿತ್ತ, ಹೈಕೋರ್ಟ್ ನತ್ತ ನೆಟ್ಟಿದೆ.