Thursday, 12th December 2024

SC verdict on Kejriwal bail: ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ- ಕೇಜ್ರಿವಾಲ್‌ಗೆ ಕೋರ್ಟ್‌ ವಿಧಿಸಿರುವ ಆ ಐದು ಷರತ್ತುಗಳೇನು?

Arvind Kejriwal

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರಿಗೆ ಸುಪ್ರೀಂ ಕೋರ್ಟ್‌(Supreme Court) ಜಾಮೀನು ಮಂಜೂರು (SC verdict on Kejriwal bail) ಮಾಡಿದೆ.

ಸೆ.5ರಂದು ಕೇಜ್ರಿವಾಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುವನ್‌ ಇದ್ದ ನ್ಯಾಯಪೀಠ, ಇಂದು ತೀರ್ಪು ಪ್ರಕಟಿಸಿದೆ. ಅಂತೆಯೇ ಬರೋಬ್ಬರಿ 10ಲಕ್ಷ ರೂ. ಬಾಂಡ್‌ ಭದ್ರತೆ ಮತ್ತು ಇಬ್ಬರು ಜಾಮೀನುದಾರರ ಆಧಾರದಲ್ಲಿ ಕೇಜ್ರಿವಾಲ್‌ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರ ಜತೆ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಲು ಕೆಲವೊಂದು ಷರತ್ತುಗಳನ್ನೂ ವಿಧಿದೆ. ಹಾಗಿದ್ದರೆ ಕೇಜ್ರಿವಾಲ್‌ ಆ ಷರತ್ತುಗಳೇನು ಎಂಬುದನ್ನು ನೋಡೋಣ.

ಕೋರ್ಟ್‌ ವಿಧಿಸಿದ ಷರತುಗಳೇನು?

  • ₹ 10 ಲಕ್ಷ ರೂ ಮೌಲ್ಯ ಬಾಂಡ್‌ ಮತ್ತು ಇಬ್ಬರು ಜಾಮೀನುದಾರರ ಸಹಿಯನ್ನೊಳಗೊಂಡಿರುವ ದಾಖಲೆಯನ್ನು ಕೋರ್ಟ್‌ಗೆ ಸಲ್ಲಿಸಬೇಕು.
  • ದೆಹಲಿ ಅಬಕಾರಿ ನೀತಿ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ.
  • ನ್ಯಾಯಾಲಯದಿಂದ ವಿನಾಯಿತಿ ನೀಡುದೇ ಕೇಜ್ರಿವಾಲ್‌ ಕೆಳ ನ್ಯಾಯಾಲಯದ ವಿಚಾರಣೆಗೆ ಗೈರಾಗುವಂತಿಲ್ಲ.
  • ಜಾಮೀನಿನ ಮೇಲೆ ಹೊರಗಿರುವ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯವನ್ನು ಪ್ರವೇಶಿಸುವಂತಿಲ್ಲ.
  • ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಪಡೆಯದೇ ದೆಹಲಿ ಸಿಎಂ ಅಧಿಕೃತ ಕಡತಗಳಿಗೆ ಸಹಿ ಹಾಕುವಂತಿಲ್ಲ.

ಕೇಜ್ರಿವಾಲ್‌ ವಿರುದ್ಧ ಪ್ರಕರಣ ಏನು?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ

ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಬದಲಾಯಿಸಿದಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: SC verdict on Kejriwal bail: ಕೇಜ್ರಿವಾಲ್‌ಗೆ ಬೇಲ್‌- ಆಪ್‌ ಸಂಭ್ರಮಾಚರಣೆ; ಕೇವಲ ಜಾಮೀನು ಅಷ್ಟೇ ಎಂದು ಬಿಜೆಪಿ ಟಾಂಗ್‌