Thursday, 12th December 2024

ನವಿ ಮುಂಬೈ: ಶಾಲಾ ಬಸ್‌ಗೆ ಬೆಂಕಿ

ಮುಂಬೈ : ನೆರೆಯ ನವಿ ಮುಂಬೈ ಟೌನ್‌ಶಿಪ್‌ನ ಖಾರ್ಘರ್ ಪ್ರದೇಶದಲ್ಲಿ ಸೋಮವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.

ಸುದ್ದಿ ತಿಳಿದ ನಂತರ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ನೀರಿನ ಟ್ಯಾಂಕರ್ ಬಂದಿದ್ದು, ನಿಮಿಷಗಳಲ್ಲಿ ಬೆಂಕಿ ನಂದಿಸಲಾಯಿತು. ವಾಹನಕ್ಕೆ ಬೆಂಕಿ ಹೊತ್ತಿಕೊಂಡಾಗ ಶಾಲೆಯೊಂದರ ನಾಲ್ವರು ವಿದ್ಯಾರ್ಥಿ ಗಳು, ಸಿಬ್ಬಂದಿ ಮತ್ತು ಚಾಲಕ ಇದ್ದರು ಎಂದು ತಿಳಿದುಬಂದಿದೆ.

ಘಟನೆಯಿಂದ ಯಾವುದೇ ಪ್ರಾಣಾಹಾನಿಗಳು ವರದಿಯಾಗಿಲ್ಲ, ಬೆಂಕಿಗೆ ನಿಖರವಾದ ಕಾರಣ ತಿಳಿದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.