Sunday, 15th December 2024

ಶಾಲೆ ಪುನರಾರಂಭಕ್ಕೆ ಸುಪ್ರೀಂ ಚಾಟಿ: ದೈಹಿಕ ತರಗತಿಗಳು ಸ್ಥಗಿತ

children

ನವದೆಹಲಿ: ನಗರದಲ್ಲಿ ವಾಯುಮಾಲಿನ್ಯದ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ದೆಹಲಿ ಸರ್ಕಾರ ದೈಹಿಕ ತರಗತಿ ಗಳನ್ನು ಸ್ಥಗಿತಗೊಳಿಸಿದೆ.

ಗುರುವಾರ ಬೆಳಗ್ಗೆ ಸುಪ್ರೀಂ ಕೋರ್ಟ್ ವಾಯು ಮಾಲಿನ್ಯ ವಿಚಾರವಾಗಿ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳನ್ನು ಸ್ಥಗಿತ ಗೊಳಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.

ವಾಯು ಗುಣಮಟ್ಟ ಸುಧಾರಿಸುವ ಮುನ್ಸೂಚನೆಯನ್ನು ಪರಿಗಣಿಸಿ ಶಾಲೆಗಳನ್ನು ಪುನಃ ತೆರೆದಿದ್ದೇವೆ. ಆದಾಗ್ಯೂ, ವಾಯು ಮಾಲಿನ್ಯದ ಮಟ್ಟವು ಮತ್ತೆ ಹೆಚ್ಚಿದೆ . ಹೀಗಾಗಿ ಮುಂದಿನ ಆದೇಶದವರೆಗೆ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ನ.13 ರಿಂದ ಮುಚ್ಚಲ್ಪಟ್ಟ ನಂತರ, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ದೈಹಿಕ ತರಗತಿಗಳು ಸರ್ಕಾರದ ಆದೇಶದ ಬಳಿಕ ಸೋಮವಾರದಿಂದ ಪುನರಾರಂಭಗೊಂಡಿದ್ದವು.