Friday, 22nd November 2024

ನವೆಂಬರ್​​ 15ರಿಂದ ಶಾಲಾ-ಕಾಲೇಜುಗಳ ಪುನರಾರಂಭ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂಬರುವ ನವೆಂಬರ್​​ 15ರಿಂದ ರಾಜ್ಯದಲ್ಲಿ ಶಾಲಾ -ಕಾಲೇಜುಗಳನ್ನು ಪುನರಾರಂಭಿಸ ಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹಬ್ಬ ಮುಗಿದ ನಂತರ ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಮತ್ತೆ ತೆರೆಯಲು ಅವಕಾಶ ನೀಡಲಾಗು ವುದು ಎಂದು ಈ ಮೊದಲೇ ಪಶ್ಚಿಮ ಬಂಗಾಳ ಸರ್ಕಾರವು ಸುಳಿವು ನೀಡಿತ್ತು.

ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಮಾರ್ಚ್ 2020ರಲ್ಲಿ ರಾಷ್ಟ್ರ ವ್ಯಾಪಿ ಲಾಕ್ ಡೌನ್ ಘೋಷಿಸಿದಾಗಿನಿಂದ ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಮುಂದಿನ ತಿಂಗಳಿನಿಂದ ಪುನರಾರಂಭಿ ಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್ಸಿಇ) ನವೆಂಬರ್ ನಲ್ಲಿ ಆಫ್ ಲೈನ್ ಸೆಮಿಸ್ಟರ್ ಬೋರ್ಡ್ ಪರೀಕ್ಷೆಗಳಿಗೆ ದಿನಾಂಕಗಳನ್ನು ಪ್ರಕಟಿಸುವ ಮುನ್ನ ಈ ಪ್ರಕಟಣೆ ಬಂದಿದೆ.