ನವದೆಹಲಿ: ರಾಜಧಾನಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.
“ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳು ಇಂದು ಮತ್ತು ನಾಳೆಯವರೆಗೆ ಮುಚ್ಚಲ್ಪಡುತ್ತವೆ” ಎಂದು ತಿಳಿಸಿದ್ದಾರೆ.
ಕಸ, ಎಲೆಗಳು, ಪ್ಲಾಸ್ಟಿಕ್ ಮತ್ತು ರಬ್ಬರ್ನಂತಹ ತ್ಯಾಜ್ಯ ವಸ್ತುಗಳನ್ನು ಸುಡುವುದನ್ನು ಗುರುಗ್ರಾಮ್ನ ಎಲ್ಲಾ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದೇಶವನ್ನು ಗುರುಗ್ರಾಮ್ ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ.
ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಭಾನುವಾರದಿಂದ ‘ಅತ್ಯಂತ ಕಳಪೆ’ಯಾಗಿದೆ. ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ಮೂರನೇ ಹಂತದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್ಎಪಿ)ಯನ್ನು ಜಾರಿಗೊಳಿಸಿದೆ.