Saturday, 14th December 2024

ಗಾಳಿಯ ಗುಣಮಟ್ಟ: ಎರಡು ದಿನ ಸರ್ಕಾರಿ, ಖಾಸಗಿ ಶಾಲೆ ಮುಚ್ಚುವಂತೆ ಆದೇಶ

ನವದೆಹಲಿ: ರಾಜಧಾನಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

ಕಸ, ಎಲೆಗಳು, ಪ್ಲಾಸ್ಟಿಕ್ ಮತ್ತು ರಬ್ಬರ್‌ನಂತಹ ತ್ಯಾಜ್ಯ ವಸ್ತುಗಳನ್ನು ಸುಡುವುದನ್ನು ಗುರುಗ್ರಾಮ್‌ನ ಎಲ್ಲಾ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದೇಶವನ್ನು ಗುರುಗ್ರಾಮ್ ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ.