Saturday, 14th December 2024

ಒಡಿಶಾದಲ್ಲಿ ಡಿ.31ರ ವರೆಗೆ ಶಾಲೆಗಳನ್ನು ತೆರೆಯಲ್ಲ: ಶಿಕ್ಷಣ ಇಲಾಖೆ

ಒಡಿಶಾ : ಡಿಸೆಂಬರ್ 31ರ ವರೆಗೆ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಒಡಿಶಾ ರಾಜ್ಯ ಸರ್ಕಾರ ಘೋಷಿಸಿದೆ. ಡಿಸೆಂಬರ್ ಮಧ್ಯಭಾಗದಲ್ಲಿ ಕೊವಿಡ್-19 ನ ಎರಡನೇ ಅಲೆ ದೇಶಕ್ಕೆ ಅಪ್ಪಳಿಸಲಿದೆ ಎಂಬ ಭೀತಿ ಇದೆ.

ಒಡಿಶಾದ ಶಾಲೆಗಳು ಮತ್ತು ಸಮೂಹ ಶಿಕ್ಷಣ ಇಲಾಖೆ ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ, 31ರವರೆಗೆ ರಾಜ್ಯದ ಎಲ್ಲ ಶಾಲೆಗಳು ಮುಚ್ಚಬೇಕು ಎಂದು ರಾಜ್ಯ ಸರ್ಕಾರ ಈ ಮೂಲಕ ನಿರ್ದೇಶನ ನೀಡಿದೆ,’ ಎಂದು ಹೇಳಿದರು.

ಈ ಅವಧಿಯಲ್ಲಿ ಆನ್ ಲೈನ್ ದೂರ ಕಲಿಕೆಗೆ ಅವಕಾಶ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ಎಸ್ ಆಯಂಡ್ ಎಂಇ ಹೇಳಿದೆ. ಪ್ರವೇಶ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೌಲ್ಯಮಾಪನ ಮತ್ತಿತರ ಆಡಳಿತಾತ್ಮಕ ಚಟುವಟಿಕೆಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಲು ಅನುಮತಿ ನೀಡಲಾಗಿದೆ.