Thursday, 12th December 2024

ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್-19 ದೃಢ

ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
‘ತಮ್ಮ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸಿ ಮತ್ತು ಅಂತವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಮುಂಬೈನಲ್ಲಿ ನಡೆದ ‘ಇಂಡಿಯಾ ಸ್ಟೀಲ್ 2023’ ಕಾರ್ಯಕ್ರಮಕ್ಕೆ ಸಿಂಧಿಯಾ ಹಾಜರಾಗಿರಲಿಲ್ಲ.