Thursday, 12th December 2024

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ, ನಂತರ ರಾಜ್ಯಸಭಾ ಸದಸ್ಯರಾದರು. ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಜೋತಿರಾದಿತ್ಯ ಸಿಂಧಿಯಾ ಅವರು ದೂರಸಂಪರ್ಕ, ವಾಣಿಜ್ಯ ಮತ್ತು ಕೈಗಾರಿಕೆ, ಇಂಧನ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2020ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ರಾಜಕೀಯ ಸ್ಥಿತ್ಯಂತರಗಳಿಂದಾಗಿಸಿಂಧಿಯಾ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ನಾಗರಿಕ ವಿಮಾನಯಾನ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಂಧಿಯಾ ಆ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.