ನವದೆಹಲಿ : ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆ ವೇಳೆ, ಮಾಲಿನ್ಯ ನಿಯಂತ್ರಣಕ್ಕಾಗಿ ಸ್ವಯಂ ಪ್ರೇರಿತವಾಗಿ 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕುವಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನ ಸವಾರರಿಗೆ ಗ್ರೀನ್ ಟ್ಯಾಕ್ಸ್ ತೆರಿಗೆ ಪರಿಚಯಿಸುವ ಮೂಲಕ, ಕೇಂದ್ರ ಸರ್ಕಾರ ಶಾಕ್ ನೀಡಿತ್ತು. ಇದೀಗ ಕೇಂದ್ರ ಬಜೆಟ್ ವೇಳೆಯಲ್ಲಿ 15 ವರ್ಷದ ಹಳೆಯ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಗುಜರಿಗೆ ವಾಹನ ಸವಾರರೇ ಹಾಕುವ ಯೋಜನೆ ಪರಿಚಯಿಸಿದೆ.
ಈ ಮೂಲಕ ವಾಹನ ಸವಾರರೇ ಹಳೆಯ ವಾಹನಗಳನ್ನು ಗುಜರಿಗೆ ಸ್ವಯಂ ಪ್ರೇರಿತವಾಗಿ ಹಾಕುವಂತೆ ಪ್ರೋತ್ಸಾಹಿಸಿದೆ.