Friday, 13th December 2024

2ನೇ ಅಲೆ ತೀವ್ರತೆ ಕಮ್ಮಿ, 1 ಲಕ್ಷ ಹೊಸ ಕೋವಿಡ್ ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದೆ. ಸೋಮವಾರ ಕಳೆದ 24 ಗಂಟೆಗಳ ಅವಧಿ ಯಲ್ಲಿ 1,00,636 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.

2,427 ಮಂದಿ ಕೋವಿಡ್ ಗೆ ಬಲಿಯಾಗಿದ್ದು, 1,74,399 ಮಂದಿ ಬಿಡುಗಡೆ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲ ಯ ತಿಳಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 2,89,09,975 ಇದ್ದು, ಮೃತಪಟ್ಟವರ ಸಂಖ್ಯೆ 3,49,186ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,01,609ಕ್ಕೆ ಏರಿಕೆಯಾಗಿದೆ.

1,74,399 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,89,09,975ಕ್ಕೆ ತಲುಪಿದೆ.