Saturday, 14th December 2024

ಥಾಣೆ ನಗರದಲ್ಲಿ 144 ಸೆಕ್ಷನ್‌ ಜಾರಿ

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರ ತೆಯ ಹಿನ್ನೆಲೆಯಲ್ಲಿ ಥಾಣೆ ಜಿಲ್ಲಾಡಳಿತವು ಜೂ. 30 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ ಘೋಷಣೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ನಗರದಲ್ಲಿ 144 ಸೆಕ್ಷನ್‌ ಜಾರಿಗೊಳಿಸಿದೆ.

38 ಶಾಸಕರ ಸದಸ್ಯರ ಭದ್ರತೆಯನ್ನು ದುರುದ್ದೇಶಪೂರ್ವಕವಾಗಿ ಹಿಂತೆಗೆದು ಕೊಳ್ಳುವ ಕುರಿತು ಸಿಎಂ ಉದ್ಧವ್ ಠಾಕ್ರೆ, ಮಹಾ ರಾಷ್ಟ್ರ ಗೃಹ ಸಚಿವ, ಡಿಜಿಪಿ ಮಹಾರಾಷ್ಟ್ರಕ್ಕೆ ಬಂಡಾಯ ಶಿವಸೇನೆ ಶಾಸಕ ಏಕನಾಥ್ ಶಿಂಧೆ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.