Saturday, 14th December 2024

ಡಿ.31ರವರೆಗೆ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ

#Section144 at Maharashtra

ಮುಂಬೈ : ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿ.31ರವರೆಗೆ ನಗರದಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಕಾರ್ಯಕ್ರಮ ಆಯೋಜಕರು ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ತಿಳಿಸಿದ್ದಾರೆ. ಮುಂಬೈ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ನಿರ್ಬಂಧವನ್ನು ಹೊರಡಿಸಿದ್ದಾರೆ.

ಕೊರೋನಾವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸ ಲಾಗಿದೆ.

ಮಹಾರಾಷ್ಟ್ರಕ್ಕೆ ಬರುವ ಎಲ್ಲಾ ಜನರು ಸಂಪೂರ್ಣವಾಗಿ ಲಸಿಕೆ ಪಡೆದಿರಬೇಕು ಅಥವಾ 72 ಗಂಟೆ ಮುಂಚಿನ ಆರ್ ಟಿ -ಪಿಸಿಆರ್ ಪರೀಕ್ಷಾ ವರದಿ ಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.